ಚೆನ್ನೈ : ಕೇರಳ, ತಮಿಳುನಾಡಿನಲ್ಲಿ ವ್ಯಾಪಕ ಹಾನಿ ಮಾಡಿದ್ದ ಫೆಂಗಲ್ ಚಂಡಮಾರುತ ಬಂದು-ಹೋದ ಕೆಲವೇ ದಿನಗಳ ಅಂತರದಲ್ಲಿ ಮತ್ತೆ ಬಂಗಾಳಕೊಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಸೃಷ್ಟಿಯಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಫೆಂಗಲ್ ಚಂಡಮಾರುತದಿಂದ ತಮಿಳುನಾಡು ಮತ್ತು ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಹಲವಾರು ಅವಾಂತರ ಸೃಷ್ಟಿಯಾಗಿತ್ತು.

ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುತ್ತಿದ್ದು, ಮತ್ತೆ ಆತಂಕ ಶುರುವಾಗಿದೆ.

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಭೀತಿ ಎದುರಾಗಿದೆ. ಈ ಬಾರಿ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಪ್ರದೇಶದಲ್ಲಿ ಸುತ್ತಮುತ್ತಲಿನ ಪ್ರದೇಶಗಳಿಗೆ ಹೋಲಿಸಿದರೆ ವಾಯುಭಾರ ಕುಸಿತದ ಲಕ್ಷಣಗಳು ಗೋಚರಿಸುತ್ತಿದ್ದು, ಇದು ಮೋಡ ಕವಿದ ವಾತಾವರಣ, ಮಳೆ ಚಟುವಟಿಕೆಗೆ ನಾಂದಿಯಾಗುತ್ತಿದೆ ಎನ್ನಲಾಗಿದೆ.

ಡಿಸೆಂಬರ್ 10ರಂದು ಮಾಡಲಾದ ಮಾಪನದಂತೆ ಸಮುದ್ರ ಮಟ್ಟದಿಂದ 5.8 ಕಿ.ಮೀ.ವರೆಗೆ ವಿಸ್ತರಿಸಿರುವ ಕಡಿಮೆ ಒತ್ತಡದ ಪ್ರದೇಶ ಮತ್ತು ಅದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯು ಮಂಗಳವಾರದ ವೇಳೆಗೆ ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂತೆಯೇ ಇದು ನಂತರ ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದ್ದು, ಶ್ರೀಲಂಕಾ-ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

https://twitter.com/dt_next/status/1868271581329506672?ref_src=twsrc%5Etfw%7Ctwcamp%5Etweetembed%7Ctwterm%5E1868271581329506672%7Ctwgr%5E523b51edb1f633afed99d40217c9571c81f79bab%7Ctwcon%5Es1_c10&ref_url=https%3A%2F%2Fapi-news.dailyhunt.in%2F

ತಮಿಳುನಾಡಿನಲ್ಲಿ ವ್ಯಾಪಕ ಮಳೆ

ನೀಲಗಿರಿ, ಕೊಯಮತ್ತೂರು, ಈರೋಡ್, ತಿರುಪ್ಪೂರು, ಸೇಲಂ, ನಾಮಕ್ಕಲ್, ದಿಂಡಿಗಲ್, ಪುದುಕ್ಕೊಟ್ಟೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ, ಅರಿಯಲೂರು, ಕಲ್ಲಕುರಿಚಿ, ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಚೆನ್ನೈ ಮತ್ತು ತಮಿಳುನಾಡಿನ ತಿರುವಳ್ಳೂರು ಜಿಲ್ಲೆಗಳು ಮತ್ತು ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ..

ಅಂತೆಯೇ ಸಮುದ್ರದಲ್ಲಿನ ಹವಾಮಾನ ವ್ಯವಸ್ಥೆಯ ಪ್ರಭಾವದಿಂದಾಗಿ, ಮೀನುಗಾರರು ಆಳ ಸಮುದ್ರ ಮೀನುಗಾರಿಕೆಗೆ ಇಳಿಯದಂತೆ ಸೂಚಿಸಲಾಗಿದೆ. ಈ ವಾರ ತಮಿಳುನಾಡು ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರಿಗೆ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲೂ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Published by

Leave a Reply

Your email address will not be published. Required fields are marked *