ಹೈದರಾಬಾದ್​: ಇಲ್ಲಿನ ಜೂಬ್ಲಿ ಹಿಲ್ಸ್​ನಲ್ಲಿರುವ ನಟ ಅಲ್ಲು ಅರ್ಜುನ್(Allu Arjun)​ ಅವರ ಮನೆ ಮೇಲೆ ಭಾನುವಾರ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಲ್ಲು ತೂರಾಟದ ಬಗ್ಗೆ ಇದೀಗ ಮಾಹಿತಿ ಲಭ್ಯವಾಗಿದ್ದು, ಈ ದಾಳಿಗೆ ಸಂಬಂಧಸಿದಂತೆ ಕಿಡಿಗೇಡಿಗಳ ವಿವರ ಲಭ್ಯವಾಗಬೇಕಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತದಲ್ಲಿ ಮಹಿಳೆ ಮೃತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳವಣಿಗೆಗಳು ದಿನೇದಿನೆ ಹೊಸ ತಿರುವು ಪಡೆದುಕೊಳ್ಳುತ್ತಿವೆ.

ಅಲ್ಲು ಅರ್ಜುನ್ (Allu Arjun) ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ನಡುವಿನ ಮುಸಿಕಿನ ಗುದ್ದಾಟಕ್ಕೆ ನಡೆಯುತ್ತಿದ್ದು. ಘಟನೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಸಿಎಂ ರೇವಂತ್ ರೆಡ್ಡಿ ಗುಡುಗಿದ್ದು, ಡಿ.22ರಂದು ವಿಧಾನಸಭೆಯಲ್ಲಿ ನಟನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

AIMIM ಪಕ್ಷದ ಶಾಸಕ ಅಕ್ಟರುದ್ದೀನ್ ಓವೈಸಿ ಪ್ರಶ್ನೆಗೆ ಉತ್ತರಿಸಿದ ಸಿಎಂ ಪೊಲೀಸರು ಅನುಮತಿ ನಿರಾಕರಿಸಿದ್ದರೂ ನಟ ಅಲ್ಲು ಅರ್ಜುನ್ (Allu Arjun) ಡಿಸೆಂಬರ್ 04 ರಂದು ಪುಷ್ಪ-2 ಪ್ರದರ್ಶನಕ್ಕೆ ಹಾಜರಾಗಿದ್ದರು. ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ನಂತರವು ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಲವಂತವಾಗಿ ಹೊರಗೆ ಕಳುಹಿಸುವವರೆಗೂ ಚಿತ್ರಮಂದಿರದಿಂದ ಹೊರಬರಲಿಲ್ಲ. ಅಲ್ಲು ಅರ್ಜುನ್ ದೊಡ್ಡ ಜನಸ್ತೋಮವಿದ್ದರೂ ರೋಡ್‌ಶೋ ನಡೆಸಿ ಜನರತ್ತ ಕೈ ಬೀಸಿದ್ದು ಗೊಂದಲಕ್ಕೆ ಕಾರಣವಾಯಿತು ಎಂದು ಆರೋಪಿಸಿದ್ದಾರೆ.

ಇನ್ನೂ ಸಿಎಂ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ನಟ ಅಲ್ಲು ಅರ್ಜುನ್‌ (Allu Arjun), ಜನರಿಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ. ನಾನು ಯಾರನ್ನೂ, ಯಾವುದೇ ಇಲಾಖೆ ಅಥವಾ ರಾಜಕೀಯ ನಾಯಕರನ್ನು ದೂಷಿಸಲ್ಲ. ಇದು ಅವಮಾನಕರ ಮತ್ತು ಚಾರಿತ್ರ್ಯ ವಧೆಯಂತೆ ಭಾಸವಾಗುತ್ತಿದೆ. ದಯವಿಟ್ಟು ನನ್ನ ಜಡ್ಜ್ ಮಾಡಬೇಡಿ. ಸಂಧ್ಯಾ ಥಿಯೇಟರ್ ಬಳಿ ನಡೆದ ಘಟನೆಗೆ ನಾನು ಈಗಲೂ ಕ್ಷಮೆಯಾಚಿಸುತ್ತೇನೆ ಎಂದಿದ್ದರು.

ಇದೆಲ್ಲದರ ನಡುವೆ ಕಾಂಗ್ರೆಸ್​ ಕಾರ್ಯಕರ್ತರು ನಿಮ್ಮ ಹೇಳಿಕೆಗಳನ್ನು ವಾಪಸ್ಸು ಪಡೆಯುವಂತೆ ಅಲ್ಲು ಅರ್ಜುನ್​ಗೆ ಒತ್ತಾಯಿಸಿ ತೆಲಂಗಾಣದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದ್ದರು. ಇದೀಗ ನಟ ಮನೆ ಮೇಲೆ ಕಲ್ಲು ತೂರಾಟದ ವರದಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ತಿರುವು ಪಡೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಾಗಿದೆ,

Published by

✍️ಪ್ರಶಾಂತ್ ಎಚ್ ವಿ

Leave a Reply

Your email address will not be published. Required fields are marked *