
ದೈತ್ಯ ಇ ಕಾಮರ್ಸ್ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಇದೀಗ ಅಮೆಜಾನ್ ಬ್ಲ್ಯಾಕ್ ಫ್ರೈಡೇ ಸೇಲ್ (Amazon Black Friday Sale) ಅನ್ನು ಆಯೋಜಿಸಿದ್ದು, ಈಗ ಲೈವ್ ಆಗಿದೆ. ಈ ಮಾರಾಟದಲ್ಲಿ ಆಯ್ದ ಬ್ರ್ಯಾಂಡ್‌ಗಳ ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಸುಮಾರು 40% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿವೆ.
ಹಾಗೆಯೇ ಗೃಹೋಪಯೋಗಿ ಉತ್ಪನ್ನಗಳು ಮತ್ತು ಸ್ಮಾರ್ಟ್ ಟಿವಿಗಳು ಶೇ. 65 ರಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ ಇವೆ.

ಹೌದು, ಅಮೆಜಾನ್ ಬ್ಲ್ಯಾಕ್ ಫ್ರೈಡೇ ಸೇಲ್ (Amazon Black Friday Sale) ಇದೇ ನವೆಂಬರ್ 28 ರಿಂದ ಚಾಲ್ತಿ ಆಗಿದ್ದು, ಡಿಸೆಂಬರ್ 2, 2024 ರ ವರೆಗೂ ಲೈವ್ ಇರಲಿದೆ. ಈ ಮಾರಾಟದ ವೇಳೆ ಆಪಲ್, ಸ್ಯಾಮ್‌ಸಂಗ್, ರೆಡ್ಮಿ, ಒನ್‌ಪ್ಲಸ್ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಡಿವೈಸ್‌ಗಳು ಆಕರ್ಷಕ ಕೊಡುಗೆಯಲ್ಲಿ ಖರೀದಿಗೆ ಲಭ್ಯ ಇವೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ ಬೊಂಬಾಟ್ ಡಿಸ್ಕೌಂಟ್ ಪಡೆದಿದೆ.
ಹಾಗೆಯೇ ಬ್ಯಾಂಕ್ ಆಫ್ ಬರೋಡಾ, ಐಸಿಐಸಿಐ ಬ್ಯಾಂಕ್, IDFC ಫಸ್ಟ್ ಬ್ಯಾಂಕ್ ಮತ್ತು OneCard ನಂತಹ ಪ್ರಮುಖ ಬ್ಯಾಂಕ್‌ಗಳಿಂದ ಆಯ್ದ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ, ಶೇ. 10% ರ ವರೆಗೂ ಇನ್‌ಸ್ಟಂಟ್ ಡಿಸ್ಕೌಂಟ್ ಕೂಡಾ ಪಡೆಯಬಹುದು ಎನ್ನಲಾಗಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಆಫರ್ ಬಗ್ಗೆ ಹಾಗೂ ಇತರೆ ಕೊಡುಗೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ – ಬಿಗ್ ಆಫರ್
ಅಮೆಜಾನ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ (Samsung Galaxy S23 Ultra 5G) ಫೋನ್ ಶೇ. 50% ರಷ್ಟು ಬಿಗ್ ಆಫರ್ ಪಡೆದಿದೆ. ಈ ಫೋನಿನ 12GB + 256GB ವೇರಿಯಂಟ್ ಬೆಲೆಯು 1,49,999ರೂ. ಆಗಿದ್ದು, ಅಮೆಜಾನ್ ಕೊಡುಗೆಯಲ್ಲಿ ಇದು 74,999ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಗ್ರಾಹಕರು ಹೆಚ್ಚುವರಿಯಾಗಿ ಬ್ಯಾಂಕ್ ರಿಯಾಯಿತಿಗಳನ್ನು ಸಹ ಪಡೆಯಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ 6.8 ಇಂಚಿನ ಡೈನಾಮಿಕ್ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಪಡೆದಿದೆ. ಈ ಡಿಸ್‌ಪ್ಲೇ 1440 x 3088 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 19.3:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 12GB + 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ ಟ್ರಿಪಲ್ ರಿಯರ್ ಫ್ಲೋಟಿಂಗ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಅನ್ನು ಪಡೆದಿದೆ. ತೃತೀಯ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಪಡೆದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ 5000 ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದ್ದು, ಹಾಗೆಯೇ 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, GPS, NFC ಮತ್ತು ಬ್ಲೂಟೂತ್ 5.3 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ.
ಇತರೆ ಆಫರ್ ಮಾಹಿತಿ
ಆಪಲ್ ಸಂಸ್ಥೆಯ ಆಪಲ್ ಮ್ಯಾಕ್‌ಬುಕ್ ಏರ್ (Apple MacBook Air – M1, 2020) ಡಿವೈಸ್ ಸಹ ಭರ್ಜರಿ ಡಿಸ್ಕೌಂಟ್ ಪಡೆದಿದೆ. ಈ ಲ್ಯಾಪ್‌ಟಾಪ್ ಡಿವೈಸ್ 89,900ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿದ್ದು, ಆದರೆ ಸದ್ಯ ಅಮೆಜಾನ್ ಬ್ಲ್ಯಾಕ್ ಫ್ರೈಡೇ ಸೇಲ್ ನಲ್ಲಿ 59,990ರೂ. ಗಳ ಬೆಲೆಗೆ ಖರೀದಿಗೆ ಲಭ್ಯ ಆಗಲಿದೆ.
Published by
twelvenewz.com