
ಇದೀಗ ರಣಭೀಕರ ಚಳಿ ನಡುವೆಯೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ವಾರ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 10) ಬೆಳಗ್ಗೆ 8 ಗಂಟೆವರೆಗೂ ಮೋಡ ಕವಿದ ವಾತಾವರಣ ಇದ್ದು, ಬಳಿಕ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೆಯೇ ಹಲವು ಜಿಲ್ಲೆಗಳಲ್ಲೂ ಸಹ ಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ಡಿಸೆಂಬರ್ 18 ವರೆಗೆ ಎಲ್ಲೆಲ್ಲಿ ಮಳೆ?: ಡಿಸೆಂಬರ್ 10ರಿಂದ 18ರ ವರೆಗೆ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ತುಮಕೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ ದಾವಣಗೆರೆ, ಚಿತ್ರದುರ್ಗ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಗದಗ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ ಎಂದು ತಿಳಿಸಿದೆ.
ಡಿಸೆಂಬರ್ 26ರ ವರೆಗೆ ಎಲ್ಲೆಲ್ಲಿ ಜೋರು ಮಳೆ?: ಡಿಸೆಂಬರ್ 18ರಿಂದ 26ರ ವರೆಗೂ ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ರಾಮನಗರ, ಚಾಮರಾಜನಗರ, ಉಡುಪಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇದೇ ವೇಳೆ ದಾವಣಗೆರೆ, ಹಾವೇರಿ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲೊ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಾರಿ ಕರ್ನಾಟಕಕ್ಕೆ ಜೂನ್ ಆರಂಭದಲ್ಲಿಯೇ ಎಂಟ್ರಿ ಕೊಟ್ಟ ಪರಿಣಾದ ಬತ್ತಿ ಹೋಗುವ ಹಂತ ತಲುಪಿದ್ದ ಕೆರೆ-ಕಟ್ಟೆ, ನದಿಗಳು ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಜಲಮೂಲಗಳೆಲ್ಲ ಬತ್ತಿ ಹೋಗಿದ್ದವು. ಮತ್ತೊಂದೆಡೆ ಸೂರ್ಯನ ಶಾಖಕ್ಕೆ ಕೃಷಿ ಬೆಳೆಗಳೆಲ್ಲ ಸುಟ್ಟು ಹೋಗಿದ್ದು, ಇದರಿಂದ ಅನ್ನದಾತರು ಕಂಗಾಲಾಗಿದ್ದರು.
Published by
