ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಚಳಿ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಫೆಂಗಲೇ ಚಂಡಮಾರುತ ಹಿನ್ನೆಲೆ ರಾಜ್ಯದ ಹಲಚು ಜಿಲ್ಲೆಗಳಲ್ಲಿ ಮಳೆಯಾಗಿದ್ದರೆ, ಇನ್ನೂ ಬೆಂಗಳೂರು ಸೇರಿದಂತೆ ಕೆಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಮತ್ತೊಂದು ಚಂಡಮಾರುತ ಹಿನ್ನೆಲೆ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 11) ಬೆಳಗ್ಗೆ 10 ಗಂಟೆಯಾದರೂ ಮೋಡ ಕವಿದ ವಾತಾವರಣ ಇದ್ದು, ಬಳಿಕ ಬಿಸಿಲಿನ ವಾತಾವರಣ ಮುಂದುವರೆದಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಮುಂದಿನ ಮೂರು ದಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 11ರಂದು ರಾಮನಗರ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಚಾಮರಾಜನಗರ, ಹಾಸನ, ಮಂಡ್ಯ ಮೈಸೂರು, ಯಾದಗಿರಿ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನುಳಿದ ಭಾಗಗಳಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 12ರಂದು ಚಿತ್ರದುರ್ಗ ಹಲವೆಡೆ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯುತೆಯಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 13ರಂದು ಕೊಡಗು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಂಮಾಂತರ ಜಿಲ್ಲೆಯ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.

ಈ ಬಾರಿ ಅಂದರೆ 2024ರ ಜೂನ್‌ ಆರಂಭದಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಕೊಟ್ಟ ಪರಿಣಾಮ ಬತ್ತಿ ಹೋಗುವ ಹಂತ ತಲುಪಿದ್ದ ಕೆರೆ-ಕಟ್ಟೆ, ನದಿಗಳು ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಜಲಮೂಲಗಳೆಲ್ಲ ಬತ್ತಿ ಹೋಗಿದ್ದವು.

ಮತ್ತೊಂದೆಡೆ ಸೂರ್ಯನ ಶಾಖಕ್ಕೆ ಕೃಷಿ ಬೆಳೆಗಳೆಲ್ಲ ಸುಟ್ಟು ಹೋಗಿದ್ದು, ಇದರಿಂದ ಅನ್ನದಾತರು ಕಂಗಾಲಾಗಿದ್ದರು. ಆದರೆ, ಇದೀಗ ಭಾರೀ ಮಳೆಯಿಂದ ಬರದ ಛಾಯೆ ಎಲ್ಲಾ ಅಳಿಸಿ ಹೋಗಿದ್ದು, ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದೆ. ಫಸಲುಗಳೆಲ್ಲ ಚೆನ್ನಾಗಿ ಬಂದಿದ್ದು ಒಂದು ಕಡೆಯಾದರೆ, ಮತ್ತೊಂದೆಡೆ ಮಾರುಕಟ್ಟೆಗಳಲ್ಲಿ ಬರದಂತೆ ದಲ್ಲಾಳಿಗಳ ಕಾಟ ಹೆಚ್ಚಾಗಿದೆ. ಇದರಿಂದ ಅನ್ನದಾತರು ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Published by

Leave a Reply

Your email address will not be published. Required fields are marked *