
ಕರ್ನಾಟಕ, ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರತ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಡಿಸೆಂಬರ್ 11 ರ ಬುಧವಾರ ಮತ್ತು ಡಿಸೆಂಬರ್ 12 ರ ಗುರುವಾರ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ.
ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ದಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ “ಆರೆಂಜ್ ಅಲರ್ಟ್ ಘೋಷಿಸಿದೆ. ” ಮತ್ತು ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, “ಯೆಲ್ಲೋ ಅಲರ್ಟ್” ನೀಡಿದೆ.ಮುಂದಿನ 24 ಗಂಟೆಗಳಲ್ಲಿ ಈ ವ್ಯವಸ್ಥೆಯು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾ-ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ಡಿಸೆಂಬರ್ 11 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನ ಅನೇಕ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡಿನ ಕಡಲೂರು, ಮಯಿಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ತಿರುವರೂರು ಮತ್ತು ಪುದುಕೊಟ್ಟೈ ಜಿಲ್ಲೆಗಳು ಮತ್ತು ಕಾರೈಕಲ್ನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಪುದುಚೇರಿ ಜೊತೆಗೆ ತಮಿಳುನಾಡಿನ ಶಿವಗಂಗಾ, ರಾಮನಾಥಪುರಂ, ತಿರುಚಿರಾಪಳ್ಳಿ, ಪೆರಂಬಲೂರು, ಅರಿಯಲೂರು, ಕಲ್ಲಕುರಿಚಿ, ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಚೆನ್ನೈ ಮತ್ತು ತಿರುವಳ್ಳೂರು ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
Published by
