Oplus_131072

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು.

ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ.

ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Published by

Leave a Reply

Your email address will not be published. Required fields are marked *