
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.
ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು.
ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.
ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.[೧] ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.
Published by

I want to point out my love for your generosity supporting persons who should have help on this one subject matter. Your special commitment to getting the message throughout turned out to be pretty useful and have consistently empowered associates much like me to arrive at their goals. Your own informative help implies a great deal to me and somewhat more to my peers. Many thanks; from everyone of us.