ರಾಜ್ಯದಲ್ಲಿ ಈ ವರ್ಷ ಯಾಕೋ ಮಳೆಗಾಲ ಮುಗಿಯೋ ಸೂಚನೇನೆ ಕಾಣುತ್ತಿಲ್ಲ. ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳಲ್ಲಿ ಸುರಿದಂತೆಯೇ ನವೆಂಬರ್‌ ತಿಂಗಳಲ್ಲೂ ಭಾರೀ ಪ್ರಮಾಣದಲ್ಲಿ ಮಳೆ (Rain) ಸುರಿಯತ್ತಿದೆ. ನವೆಂಬರ್‌ ತಿಂಗಳ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿತ್ತು.

ಈಗ ನವೆಂಬರ್‌ ತಿಂಗಳ ಅಂತ್ಯದಲ್ಲೂ ಉತ್ತಮ ಮಳೆಯಾಗುತ್ತಿದೆ. ಡಿಸೆಂಬರ್ 11ರ ವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ನವೆಂಬರ್ 25ರಿಂದ ಡಿಸೆಂಬರ್ 3ರ ವರೆಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಡಿಸೆಂಬರ್‌ನಲ್ಲಿ ಭಾರೀ ಮಳೆ, ಹವಾಮಾನ ಇಲಾಖೆಯ ಮುನ್ಸೂಚನೆ

ನವೆಂಬರ್‌ ತಿಂಗಳ ನಂತರ ಡಿಸೆಂಬರ್‌ನಲ್ಲೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 3ರಿಂದ 11ರ ವರೆಗೂ ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಲಾಗಿದೆ. ಮಂಡ್ಯ, ರಾಮನಗರ, ಶಿವಮೊಗ್ಗ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

Published by

twelvenewz.com

✍️ಪ್ರಶಾಂತ್ ಎಚ್ ವಿ

Leave a Reply

Your email address will not be published. Required fields are marked *