
ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಚಳಿಯ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 2 ವಾರಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು (ಡಿಸೆಂಬರ್ 12) ಬೆಳಗ್ಗೆಯಿಂದಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ನಗರದ ಹಲವೆಡೆ ಮಳೆಯಾಗಿದೆ. ಕೋರಮಂಗಲ, ಮೆಜೆಸ್ಟಿಕ್, ಯಶವಂತಪುರ, ಕೆಆರ್ ಪುರಂ, ಶೇಷಾದ್ರಿಪುರಂ, ಬಿಟಿಎಂ ಲೇಔಟ್, ಕೆಆರ್ ಮಾರುಕಟ್ಟೆ ಸೇರಿದಂತೆ ನಗರದ ಹಲವೆಡೆ ಮಳೆ ಮುಂದುವರೆದಿದೆ. ಪರಿಣಾಮ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಇನ್ನು ರಾತ್ರಿ ವೇಳೆಗೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆಯಿದ ಎನ್ನುವ ಮುನ್ಸೂಚನೆ ಇದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?: ಡಿಸೆಂಬರ್ 12ರಿಂದ 20ರ ವರೆಗೆ ಶಿವಮೊಗ್ಗ, ಉಡುಪಿ, ದಾವಣಗೆರೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಹಾವೇರಿ, ಉತ್ತರ ಕನ್ನಡ ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಮೋಡ ಕವಿದಾ ವಾತಾವರಣ ಇರಲಿದ್ದು, ಇಲ್ಲಿನ ಪ್ರತ್ಯೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.
ಡಿಸೆಂಬರ್ 20ರಿಂದ 28ರ ವರೆಗೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಗದಗ, ವಿಜಯನಗರ, ಬಳ್ಳಾರಿ, ಕೊಪ್ಪಳ, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಉತ್ತರ ಕನ್ನಡ, ಮಂಡ್ಯ, ಹಾಸನ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ರಾಜ್ಯದ ಮುಂಗಾರು ಮಳೆ ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟ ಹಿನ್ನೆಲೆ ಕೆರೆ-ಕಟ್ಟೆಗಳು, ನದಿಗಳು ಜಲಾಶಯಗಳು ತುಂಬಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
Published by
