ಇದೀಗ ಚಳಿಗಾಲದ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 21ರ ವರೆಗೂ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಬಳಿಕ ಸಂಜೆವರೆಗೂ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇನ್ನು ರಾತ್ರಿ ವೇಳೆಗೆ ಮಂಜಿನ ಜೊತೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹಾಗೆಯೇ ಹಲವು ಜಿಲ್ಲೆಗಳಲ್ಲೂ ಮಳೆ ಸುರಿಯುವ ಮುನ್ಸೂಚನೆ ನೀಡಿದೆ.

ಡಿಸೆಂಬರ್ 13ರ ವರೆಗೂ ಎಲ್ಲಿ ಮಳೆ?: ಡಿಸೆಂಬರ್ 5ರಿಂದ 13ರ ವರೆಗೂ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಕೊಪ್ಪಳ್ಳ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮಂಡ್ಯ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ವೇಳೆ ಹಾಸನ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 21ರ ವರೆಗೆ ಎಲ್ಲೆಲ್ಲಿ ಮಳೆ?: ಡಿಸೆಂಬರ್ 13ರಿಂದ 21ರ ವರೆಗೆ ತುಮಕೂರು, ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇದೇ ವೇಳೆ ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ರಾಜ್ಯದಲ್ಲಿ ಬಹುತೇಕ ಜಲಮೂಲ ಬತ್ತಿ ಹೋಗುವ ಹಂತವನ್ನು ತಲುಪಿದ್ದವು. ಮತ್ತೊಂದೆಡೆ ಇದರಿಂದ ಕೃಷಿ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಬತ್ತಿ ಹೋಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸವೇ ಕಮರಿ ಹೋಗಿತ್ತು. ಇನ್ನು 2024ರ ಜೂನ್‌ ಆರಂಭ ಆಗುತ್ತಿದ್ದಂತೆ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಟ್ಟ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆ ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು ಬಳಿಕವೇ ಕರ್ನಾಟಕದಲ್ಲಿ ಅಬ್ಬರಿಸಿತು. ಇದಾದ ನಂತರ ದೇಶದ ಬಹುತೇಕ ಭಾಗಗಳಿಗೆ ಆವರಿಸಿಬಿಟ್ಟಿತು. ಅದರಲ್ಲೂ ಈ ಬಾರಿ ರಾಜ್ಯದ ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ, ಬಾಗಲಕೋಟೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ.

Published by

Leave a Reply

Your email address will not be published. Required fields are marked *