ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವುದರಿಂದ ಚಳಿಯ ಪ್ರಮಾಣ ಭಾರಿ ಹೆಚ್ಚಾಗಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಶೀತಗಾಳಿ ಬೀಸಲಿದ್ದು, ಕನಿಷ್ಠ ತಾಪಮಾನದಲ್ಲೂ ಕುಸಿತ ಕಾಣಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಒಳನಾಡಿನಲ್ಲಿ ಬೀದರ್, ಬಿಜಾಪುರ ಮತ್ತು ಗುಲಬರ್ಗಾ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳವರೆಗೆ ಸಾಮಾನ್ಯ ತಾಪಮಾನದಿಂದ 6-7 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ.
ಮತ್ತು ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಮಾನ್ಯದಿಂದ 4-5 ಡಿಗ್ರಿ ಸೆಲ್ಸಿಯಸ್ ಕುಸಿಯಲಿದೆ. ನಂತರ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಹೆಚ್ಚಳವಾಗಲಿದೆ. ಮುಂದಿನ 3 ದಿನಗಳವರೆಗೆ ಸಾಮಾನ್ಯ ತಾಪಮಾನದಿಂದ ಕನಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಇಳಿಕೆ ಕಾಣಲಿದೆ. ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆ. ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಬೀದರ್, ಬಿಜಾಪುರ ಮತ್ತು ಗುಲ್ಬರ್ಗ ಜಿಲ್ಲೆಗಳಲ್ಲಿ ತೀವ್ರ ಶೀತ ಅಲೆಗಳ ಪರಿಸ್ಥಿತಿ ಇರುವ ಸಾಧ್ಯತೆಯಿದೆ, ಹಾಗಾಗಿ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ. ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಶೀತ ಅಲೆಯ ಇರುವ ಸಾಧ್ಯತೆಯಿದೆ ಸಾಧ್ಯತೆಯಿದೆ, ಅಲ್ಲಿ ತಾಪಮಾನವು ಸುಮಾರು 10 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆಯೂ ಇದೆ.
ಡಿಸೆಂಬರ್ 18ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಬೀದರ್, ಬಿಜಾಪುರ ಮತ್ತು ಗುಲ್ಬರ್ಗ ಜಿಲ್ಲೆಗಳಲ್ಲಿ ತೀವ್ರ ಶೀತ ಅಲೆಗಳ ಪರಿಸ್ಥಿತಿ ಇರಲಿದೆ. ಅಲ್ಲಿ ತಾಪಮಾನವು 6ರಿಂದ 7 ಡಿಗ್ರಿ ಸೆಲ್ಸಿಯಸ್ ಕುಸಿಯಲಿದೆ. ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಶೀತ ಅಲೆಯ ಬೀಸುವ ಜೊತೆಗೆ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ.

ಡಿಸೆಂಬರ್ 19ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ಡಿಸೆಂಬರ್ 20ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ, ಹಾಸನ, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ರಾಯಚೂರು, ಗದಗ, ಹಾವೇರಿ ಮತ್ತು ಕೋಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಡಿಸೆಂಬರ್ 21 ಹಾಗೂ 22ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ, ಹಾಸನ, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ರಾಯಚೂರು, ಗದಗ, ಹಾವೇರಿ ಮತ್ತು ಕೋಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
Published by
