
ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025 Auction) ಟೂರ್ನಿಯ ಮೆಗಾ ಹರಾಜಿನಲ್ಲಿ 13ರ ವಯಸ್ಸಿನ ಹುಡುಗ ವೈಭವ್ ಸೂರ್ಯವಂಶಿ ದಾಖಲೆ ಬರೆದಿದ್ದಾನೆ. ಸೋಮವಾರ ನಡೆದಿದ್ದ ಮೆಗಾ ಹರಾಜಿನಲ್ಲಿ ವೈಭವ್ ಸೂರ್ಯವಂಶಿ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ 1.10 ಕೋಟಿ ರೂ.ಗಳಿಗೆ ಖರೀದಿಸಿದೆ.
ಆ ಮೂಲಕ ಐಪಿಎಲ್‌ಗೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ಬರೆದಿದ್ದಾರೆ.
ಮೆಗಾ ಹರಾಜಿನಲ್ಲಿ ಬಿಹಾರ ಮೂಲದ ಬ್ಯಾಟ್ಸ್‌ಮನ್ ಅನ್ನು ಖರೀದಿಸಲು ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ, ಅಂತಿಮವಾಗಿ ಐಪಿಎಲ್ ಇತಿಹಾಸ ಕಿರಿಯ ಆಟಗಾರನನ್ನು ಖರೀದಿಸುವಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಯಶಸ್ವಿಯಾಯಿತು.
ವೈಭವ್ ಸೂರ್ಯವಂಶಿ ಯಾರು?

2011ರಲ್ಲಿ ಜನಿಸಿರುವ ವೈಭವ್ ಸೂರ್ಯವಂಶಿ ಅವರು ತನ್ನ ನಾಲ್ಕನೇ ವಯಸ್ಸಿನಲ್ಲಿಯೇ ಕ್ರಿಕೆಟ್ ಬಗ್ಗೆ ಆಸಕ್ತಿಯನ್ನು ಬೆಳೆಸಿಕೊಂಡಿದ್ದರು. ಇವರ ಸಂಜೀವ್, ತನ್ನ ಮಗನ ಕ್ರಿಕೆಟ್ ಆಸಕ್ತಿಯನ್ನು ತಿಳಿಸಿ ಮನೆಯಂಗಳದಲ್ಲಿಯೇ ಕ್ರಿಕೆಟ್ ಅಭ್ಯಾಸವನ್ನು ಮಾಡಿಸಿದ್ದರು. ನಂತರ 9ನೇ ವಯಸ್ಸಿನಲ್ಲಿಯೇ ವೈಭವ್ ಸೂರ್ಯವಂಶಿಯನ್ನು ಅವರ ತಂದೆ ಸಮಸ್ತಿಪುರ್ ಸಮೀಪ ಕ್ರಿಕೆಟ್ ಅಕಾಡೆಮಿಗೆ ಸೇರಿಸಿದ್ದರು. ಈ ಅಕಾಡೆಮಿಯಲ್ಲಿ ಕ್ರಿಕೆಟ್ ಆಡುತಾ ಬೆಳೆದ ವೈಭವ್ ಸೂರ್ಯವಂಶಿ, ತನ್ನ 12ನೇ ವಯಸ್ಸಿನಲ್ಲಿ ಬಿಹಾರ ತಂಡದ ಪರ ವಿನೋ ಮಂಕಡ್ ಟ್ರೋಫಿ ಟೂರ್ನಿಯಲ್ಲಿ ಆಡಿದ್ದರು. ಇಲ್ಲಿ ಆಡಿದ್ದ ಕೇವಲ ಐದು ಪಂದ್ಯಗಳಿಂದ ಅವರು 400 ರನ್‌ಗಳನ್ನು ಸಿಡಿಸಿದ್ದರು.
ನಂತರ ತಮ್ಮ 12ನೇ ವಯಸ್ಸಿನಲ್ಲಿಯೇ ವೈಭವ್ ಬಿಹಾರ ಹಿರಿಯರ ತಂಡದ ಪರ ದೇಶಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅಲ್ಲದೆ ಇತ್ತೀಚೆಗೆ ಅಂಡರ್19 ಭಾರತ ತಂಡದ ಪರ ಆಡಿದ್ದ ವೈಭವ್, ಚೆನ್ನೈನಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡದ ವಿರುದ್ದ ನಾಲ್ಕು ದಿನಗಳ ಪಂದ್ಯದಲ್ಲಿ ಕೇವಲ 58 ಎಸೆತಗಳಲ್ಲಿ ಶತಕವನ್ನು ಸಿಡಿಸಿದ್ದರು
Published by
twelvenewz.com