ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಒಂದು ವಾರದಲ್ಲಿ ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ.

ಹಿಂಗಾರು ಮಳೆಯಿಂದ ಅಂದಾಜು 120 ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ. ರೈತರಿಗೆ ಪರಿಹಾರ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 24,500 ಕೋಟಿ ರೂ. ಆದಾಯ ಸಂಗ್ರಹ ಗುರಿ ಹೊಂದಿದ್ದು, ಆದಾಯ ಸಂಗ್ರಹದಲ್ಲಿ ಕಂದಾಯ ಇಲಾಖೆ ಶೇಕಡ 26ರಷ್ಟು ಬೆಳವಣಿಗೆ ದರ ಹೊಂದಿದೆ. ಅಕ್ಟೋಬರ್ ಅಂತ್ಯದ ವೇಳೆಗೆ ಸ್ಟ್ಯಾಂಪ್ಸ್, ರಿಜಿಸ್ಟ್ರೇಷನ್ ಸೇರಿದಂತೆ ವಿವಿಧ ಮೂಲಗಳಿಂದ 15000 ಕೋಟಿ ರೂ. ಸಂಗ್ರಹಿಸಲಾಗಿದೆ. ಮುಂದಿನ ಐದು ತಿಂಗಳಲ್ಲಿ ಗುರಿ ತಲುಪಲಿದೆ ಎಂದು ತಿಳಿಸಿದ್ದಾರೆ.

Published by

Leave a Reply

Your email address will not be published. Required fields are marked *