Weather Forecat: ಭೀಕರ ಚಳಿಯ ನಡುವೆಯೂ ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಈ ಭಾಗಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹಾವಾಮನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ಈಗಾಗಲೇ ಕಳೆದ 24 ಗಂಟೆಗಳಲ್ಲಿ ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಅಲ್ಲದೆ, ಪಂಜಾಬ್, ಹರಿಯಾಣ, ಚಂಡೀಗಢ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಹಲಚೆಡೆ ಶೀತಗಾಳಿ ಬೀಸಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಜೊತೆಗೆ ವಾಯುವ್ಯ ಭಾರತದಲ್ಲಿ 5 ದಿನ ಹಾಗೂ ಮಧ್ಯ ಭಾರತದಲ್ಲಿ ಮುಂದಿನ 3 ದಿನ ತೀವ್ರ ಚಳಿ ಇರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರಾವಾನಿಸಿದೆ.
ಕಳೆದ 24 ಗಂಟೆಗಳಲ್ಲಿ ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಭಾರೀ ಮಳೆಯಾಗಿದೆ. ಅಲ್ಲದೇ, ಪಂಜಾಬ್, ಹರಿಯಾಣ, ಚಂಡೀಗಢ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶದ ಹಲವೆಡೆ ಶೀತಗಾಳಿ ಮುಂದುವರೆದಿತ್ತು. ಹಾಗೆಯೇ ಮುಂದಿನ ಹಲವ ದಿನಗಳವರೆಗೆ ಪಶ್ಚಿಮ ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಶೀತ ಅಲೆಯ ಪರಿಸ್ಥಿತಿ ಮುಂದುವರೆಯಲಿದ್ದು, ಒಡಿಶಾ, ಮೇಘಾಲಯ, ತ್ರಿಪುರಾದಲ್ಲಿ ದಟ್ಟ ಮಂಜು ಆವರಿಸಲಿದೆ ಎಂದು ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?: ಹವಾಮಾನ ಇಲಾಖೆಯ ಪ್ರಕಾರ, ಡಿಸೆಂಬರ್ 17 ರಿಂದ 19ರ ವರೆಗೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗಲಿದೆ. ಡಿಸೆಂಬರ್ 18 ಮತ್ತು 19ರಂದು ಕೇರಳ, ಡಿಸೆಂಬರ್ 17-19ರ ವರೆಗೆ ತಮಿಳುನಾಡಿನ ಪುದುಚೇರಿ, ಕರಾವಳಿ ಆಂಧ್ರಪ್ರದೇಶದ ಹಲವೆಡೆ ಹಾಗೂ ಕರ್ನಾಟಕದ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಪಮಾನದಲ್ಲಿ ಇಳಿಕೆ: ಇದೀಗ ದೇಶದ ಹಲವೆಡೆ ಭೀಕರ ಚಳಿಯ ವಾತಾವರಣ ನಿರ್ಮಾಣವಾಗುತ್ತಿದೆ. ಕನಿಷ್ಠ ತಾಪಮಾನವು 4-8 ಡಿಗ್ರಿ ಸೆಲ್ಸಿಯಸ್ ನಡುವೆ ದಾಖಲಾಗುತ್ತಿದ್ದರೆ, ಮಧ್ಯ ಭಾರತದಲ್ಲಿ 8-14 ಡಿಗ್ರಿಗಳ ನಡುವೆ ದಾಖಲಾಗುತ್ತಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ ಪ್ರಮಾಣ ಒಂದರಿಂದ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿದಿದೆ. ಪಂಜಾಬ್‌ನ ಆದಂಪುರದಲ್ಲಿ 1.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಹೆಚ್ಚು ಚಳಿ:? ಚಳಿಯ ಡಿಸೆಂಬರ್ 17-20ರ ವರೆಗೆ ಪೂರ್ವ ರಾಜಸ್ಥಾನದಲ್ಲಿ ಶೀತದ ಅಲೆಯು ಮೇಲುಗೈ ಸಾಧಿಸಲಿದೆ. ಅಲ್ಲದೇ, ಡಿಸೆಂಬರ್ 19ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಪಶ್ಚಿಮ ರಾಜಸ್ಥಾನ, ಉತ್ತರಾಖಂಡದಲ್ಲಿ ಶೀತದ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 21ರ ವರೆಗೆ ಪೂರ್ವ ರಾಜಸ್ಥಾನ, ಡಿಸೆಂಬರ್ 17ರಂದು ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರದ ಮರಾಠವಾಡ, ಸೌರಾಷ್ಟ್ರ ಮತ್ತು ಕಚ್ ಮತ್ತು ತೆಲಂಗಾಣದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Published by
