Weather Forecast: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ಅವಾಂತರಗಳೇ ಸೃಷ್ಟಿಸಿದೆ. ಇದೀಗ ಭೀಕರ ಚಳಿ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 2 ದಿನ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮುಂದಿನ 5-7 ದಿನಗಳವರೆಗೆ ವಾಯುವ್ಯ ಭಾರತದಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮತ್ತೊಂದೆಡೆ ಇದೀಗ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆ ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್, ರಾಯಲಸೀಮಾದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ಭಾರೀ ಮಳೆ?: ಡಿಸೆಂಬರ್ 19ರಿಂದ ಡಿಸೆಂಬರ್ 20ರ ವರೆಗೆ ಕರಾವಳಿ ಆಂಧ್ರಪ್ರದೇಶದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಅದರಲ್ಲೂ ರಾಯಲಸೀಮಾದಲ್ಲಿ ಭಾರೀ ಮಳೆಯಾಗು ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಡಿಸೆಂಬರ್ 19ರಿಂದ ಡಿಸೆಂಬರ್ 22ರ ವರೆಗೆ ಹಿಮಾಚಲ ಪ್ರದೇಶ, ಪೂರ್ವ ರಾಜಸ್ಥಾನದಲ್ಲಿ ಚಳಿ ಪ್ರಯಾಣ ಹೆಚ್ಚಾಗುವ ಸಾಧ್ಯತೆಯಿದೆ. ಡಿಸೆಂಬರ್ 20 ರಿಂದ 21ರ ವರೆಗೆ ಪಶ್ಚಿಮ ರಾಜಸ್ಥಾನ, ಡಿಸೆಂಬರ್ 22ರ ವರೆಗೆ ಪಂಜಾಬ್, ಡಿಸೆಂಬರ್ 23 ಮತ್ತು ಡಿಸೆಂಬರ್ 24 ರಂದು ಜಮ್ಮು-ಕಾಶ್ಮೀರ, ಮುಜಫರಾಬಾದ್, ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್‌ನಲ್ಲಿ ಇದೇ ರೀತಿಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದ ಎಂದು ತಿಳಿಸಿದೆ.
ಎಲ್ಲೆಲ್ಲಿ ದಟ್ಟ ಮಂಜಿನ ವಾತಾವರಣ?: ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ಪ್ರತ್ಯೇಕ ಪ್ರದೇಶಗಳಲ್ಲಿ ಡಿಸೆಂಬರ್ 19 ರಂದು ತಡರಾತ್ರಿ ಸಮಯದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಹಾಗೆಯೇ ಡಿಸೆಂಬರ್ 20 ಮತ್ತು ಡಿಸೆಂಬರ್ 21ರಂದು ಜಾರ್ಖಂಡ್, ಡಿಸೆಂಬರ್ 19ರಿಂದ ಡಿಸೆಂಬರ್ 22ರ ವರೆಗೆ ಪೂರ್ವ ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದಲ್ಲಿ ದಟ್ಟ ಮಂಜು ಕವಿದಿರುವ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿಇಂದು 4 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಹೊಗೆಯ ಜೊತೆ ದಟ್ಟವಾದ ಮಂಜು ಕವೊದ ವಾತಾವರಣ ನಿರ್ಮಾಣವಾಗಲಿದೆ. ನವದೆಹಲಿಯ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 7 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Published by
